Kagga Logo

Meaning of life

4

8

4

ಏನು ಜೀವನದರ್ಥ? ಏನು ಪ್ರಪಂಚಾರ್ಥ? ।
ಏನು ಜೀವಪ್ರಪಂಚಗಳ ಸಂಬಂಧ? ॥
ಕಾಣದಿಲ್ಲಿ‍ರ್ಪುದೇನಾನುಮುಂಟೆ? ಅದೇನು? ।
ಜ್ಞಾನಪ್ರಮಾಣವೇಂ? - ಮಂಕುತಿಮ್ಮ ॥ ೪ ॥

“ಈ ನಮ್ಮ ಜೀವನಕ್ಕೆ ಏನಾದರೂ ಅರ್ಥ ಇದೆಯೇ? ನಾವಿರುವ ಈ ಪ್ರಪಂಚದ ಅರ್ಥವೇನು? ನಮ್ಮ ಮತ್ತು ನಾವು ಇರುವ ಈ ಪ್ರಪಂಚದ ಪರಸ್ಪರ ಸ೦ಬ೦ಧವೇನು? ಇವೆರಡನ್ನೂ ಬೆಸೆದಿರುವ, ನಮ್ಮ ಕಣ್ಣಿಗೆ ಕಾಣದ ಒಂದು ಶಕ್ತಿ ಏನಾದರೂ ಇದೆಯೇ? ಹಾಗಿದ್ದರೆ ಅದೇನು? ಅದು ನಮ್ಮ ವಿಚಾರ ಮತ್ತು ಜ್ಞಾನದ ಪರಿಧಿಯಿಂದ ಮೀರಿದೆಯೇ? ಹಾಗಾದರೆ ಅದು ಏನು? ” ಎಂಬ ಭಾವಗಳನ್ನು ವ್ಯಕ್ತಪಡಿಸುತ್ತಾರೆ ಈ ಕಗ್ಗದಲ್ಲಿ ಮಾನ್ಯ ಶ್ರೀ ಡಿ.ವಿ.ಜಿ ಯವರು.

What is life? What is this world? What is the relation between the two? Is there anything here that we do not see? What is it? Can cognisance (knowledge) of something is the only proof for its existence? - Mankutimma

5

ದೇವರೆಂಬುದದೇನು ಕಗ್ಗತ್ತಲೆಯ ಗವಿಯೆ? ।
ನಾವರಿಯಲಾರದೆಲ್ಲದರೊಟ್ಟು ಹೆಸರೆ? ॥
ಕಾವನೊರ್ವನಿರಲ್ಕೆ ಜಗದ ಕಥಯೇಕಿಂತು? ।
ಸಾವು ಹುಟ್ಟುಗಳೆನು? - ಮಂಕುತಿಮ್ಮ ॥ ೫ ॥

ದೇವರು ಎನ್ನುವುದು ಏನು? ಅದೇನು ಕತ್ತಲು ಕವಿದ ಗವಿಯೆ? ಎನ್ನುತ್ತಾರೆ ಮಾನನೀಯ ಗುಂಡಪ್ಪನವರು.

Is God confined to the dark caves (of sanctum sactorum)? Is it the representation of all that we can not understand? If there is one God looking over the entire world, then why is the world's story like this? What is the secret of birth and death? - Mankutimma

6

ಒಗಟೆಯೇನೀ ಸೃಷ್ಟಿ? ಬಾಳಿನರ್ಥವದೇನು? ।
ಬಗೆದು ಬಿಡಿಸುವರಾರು ಸೊಜಿಗವನಿದನು? ॥
ಜಗವ ನಿರವಿಸಿದ ಕೈಯೊದಾದೊಡೇಕಿಂತು ।
ಬಗೆಬಗೆಯ ಜೀವಗತಿ? - ಮಂಕುತಿಮ್ಮ ॥ ೬ ॥

ಈ ಸೃಷ್ಟಿಯು ಒಗಟೇ? ಈ ಬಾಳಿಗೆ ಅರ್ಥವೇನು ?. ಆದರೆ ಈ ಒಗಟನ್ನು ಬಿಡಿಸುವವರು ಯಾರು. ಈ ಜಗತ್ತನ್ನು ಸೃಷ್ಟಿಮಾಡಿದ ಕೈ ಒಂದೇ ಆದರೆ , ಸೃಷ್ಟಿಯಲ್ಲಿ ಸಮಾನತೆಯೇಕಿಲ್ಲ  ?  ಬೇರೆ ಬೇರೆಯಾದ ಜೀವಗತಿ ಏಕೆ? ಎನ್ನುವ ಪ್ರಶ್ನೆಗಳನ್ನು ತಮಗೆ ತಾವೇ ಕೇಳಿಕೊಳ್ಳುವ ರೀತಿಯಲ್ಲಿ ಶ್ರೀ ಗುಂಡಪ್ಪನವರು, ನಮ್ಮೆಲ್ಲರ ಮುಂದೆ ಈ ಕಗ್ಗದ ರೂಪದಲ್ಲಿ ಇಟ್ಟಿದ್ದಾರೆ. 

Is this world a mere riddle? What is the reason for living? Who will decipher this wonder? If a single hand created this world, then why is there so much diversity in life? - Mankutimma

7

ಬದುಕಿಗಾರ್ ನಾಯಕರು, ಏಕನೊ ಅನೇಕರೋ? ।
ವಿಧಿಯೊ ಪೌರುಷವೊ ಧರುಮವೊ ಅಂಧಬಲವೋ? ॥
ಕುದುರುವುದೆಂತು ಈಯವ್ಯವಸ್ಥ್ರೆಯ ಪಾಡು? ।
ಅದಿಗುದಿಯೆ ಗತಿಯೇನೋ? - ಮಂಕುತಿಮ್ಮ ॥ ೭ ॥

ಈ ಬದುಕಿಗೆ ಯಾರು ನಾಯಕರು? ಒಬ್ಬನೇ ಒಬ್ಬನೋ ಅಥವಾ ಅನೇಕರಿದ್ದಾರೆಯೋ? ಅಥವಾ ಈ ಬದುಕಿಗೆ ನಾಯಕ, ವಿಧಿಯೋ,ಧರ್ಮವೋ,ಅಥವಾ ಅಂಧ ಶ್ರದ್ಧೆಯೋ? ಹಿಂದಿನ ಕಗ್ಗದಲ್ಲಿ ಉಲ್ಲೇಖಿಸಿರುವ ಅವ್ಯವಸ್ಥೆ ಸರಿಯಾಗುವುದೋ ಇಲ್ಲವೋ? ಅಥವಾ ಇವೆಲ್ಲರದರ ವಿಚಾರದ ತಳಮಳದಲ್ಲಿಯೇ ನಾವು ಯಾವಾಗಲೂ ಇರಬೇಕೆ?  ಈ ರೀತಿಯ ಪ್ರಶ್ನೆಗಳನ್ನು ಸನ್ಮಾನ್ಯ ಡಿ ವಿ ಗುಂಡಪ್ಪನವರು ತಮ್ಮನ್ನೇ ತಾವು ಕೇಳಿಕೊಳ್ಳುತ್ತಾ, ಓದುಗರ ಮುಂದೆ ಪ್ರಸ್ತಾಪಿಸುತ್ತಾರೆ.  

Who is pulling the strings of life? One? or Many? Is it fate, valour, morality or just faith that drives us all? When will this chaos actually work? Is this chaos the final reality? - Mankutimma

8

ಕ್ರಮವೊಂದು ಲಕ್ಷ್ಯವೊಂದುಂಟೇನು ಸೃಷ್ಟಿಯಲಿ? ।
ಭ್ರಮಿಪುದೇನಾಗಾಗ ಕರ್ತೃವಿನ ಮನಸು? ॥
ಮಮತೆಯುಳ್ಳವನಾತನಾದೊಡೀ ಜೀವಗಳು ।
ಶ್ರಮಪಡುವುವೇಕಿಂತು? - ಮಂಕುತಿಮ್ಮ ॥ ೮ ॥

ಇಲ್ಲಿ ಗುಂಡಪ್ಪನವರು  ಕೇಳುವ ಪ್ರಶ್ನೆ ಹೀಗಿದೆ” ಈ ಭಗವಂತನ ಸೃಷ್ಟಿಯಲ್ಲಿ ಒಂದು ಕ್ರಮ ಅಥವಾ ಗುರಿ ಏನಾದರೂ ಇದೆಯೇ? ಈ ಸೃಷ್ಟಿಕರ್ತನ ಮನಸ್ಸು ಏಕೆ ಆಗಾಗ ವಿಚಲಿತವಾಗಿ ಎಲ್ಲೆಲ್ಲೋ ಹರಿದಾಡುತ್ತದೆ. ?ತಾನು ಸೃಷ್ಟಿಸಿದ ಜೀವಿಗಳ ಮೇಲೆ ಅವನಿಗೆ ಪ್ರೀತಿ ವಾತ್ಸಲ್ಯಗಳು ಇರುವುದಾದರೆ ಈ ಜೀವಿಗಳು ಏತಕ್ಕಾಗಿ ಈ ರೀತಿಯ ಕಷ್ಟಗಳನ್ನು ಅನುಭವಿಸುತ್ತವೆ? 

Is there a rule or a goal for this world? Does the creator's mind wander from time to time? If the creator is always benevolent, then why are all these beings struggling so much? - Mankutimma